ಚಿಕ್ಕಮಗಳೂರು: ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿ ಬಾಲಕರು ನಾಪತ್ತೆ

ಚಿಕ್ಕಮಗಳೂರು: ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆ ವಿವರ:
ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ.
ಅವರು ಮನೆಗೂ ತೆರಳಿಲ್ಲ, ಅವರ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
ಈ ಹಿಂದೆಯೂ ಈ ಇಬ್ಬರು ಮಕ್ಕಳು ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಲಾ ಆಡಳಿತ ಮಂಡಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸದ್ಯ ಪೊಲೀಸ್ ತನಿಖೆ ಮುಂದುವರಿಯುತ್ತಿದೆ.
ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಇದೀಗ, ಮಂಗಳೂರು ಬಾಲಕನ ನಾಪತ್ತೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಪೋಷಕರ ಆತಂಕ ಹೆಚ್ಚಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: