ಚಿಕ್ಕಪ್ಪನಿಂದಲೇ ಯುವತಿಯ ನಿರಂತರ ಅತ್ಯಾಚಾರ, ಕೊಲೆ ಬೆದರಿಕೆ
14/06/2021
ಬಂಟ್ವಾಳ: ಯುವತಿಯೋರ್ವಳನ್ನು ಚಿಕ್ಕಪ್ಪನೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬೆದರಿಕೆ ಹಾಕಿ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಬಂಟ್ವಾಳದ ಪುರುಷೋತ್ತಮ ಎಂಬಾತ ತನ್ನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬಲಾತ್ಕಾರ ನಡೆಸಿದ್ದು, ಮನೆಯವರಿಗೆ ಈ ಬಗ್ಗೆ ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳೆದ ಒಂದು ವರ್ಷಗಳಿಂದ ಯುವತಿ ಬಿ.ಸಿ.ರೋಡಿನ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದು, ಇದೇ ಪ್ರದೇಶದಲ್ಲಿ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ ಎಂದು ಹೇಳಲಾಗಿದೆ. ಆಗಿನಿಂದಲೇ ಯುವತಿಯ ಮೇಲೆ ನಿರಂತರ ಅತ್ಯಾಚಾರ ನಡೆಸಲು ಆರಂಭಿಸಿದ್ದ ಎಂದು ಹೇಳಲಾಗಿದೆ. ಈತನ ಅತ್ಯಾಚಾರ, ಬೆದರಿಕೆಗಳನ್ನು ಸಹಿಸಲು ಸಾಧ್ಯವಾಗದೇ ಕೊನೆಗೆ ಯುವತಿ ತನ್ನ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ ಎಂದು ವರದಿಯಾಗಿದೆ.