ಚಿಕ್ಕಮಗಳೂರು: ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವು
ಚಿಕ್ಕಮಗಳೂರು: ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜುನಾಥ್–ಮಂಗಳ ದಂಪತಿಯ 5 ವರ್ಷದ ಬಾಲಕಿ ಎಂದು ತಿಳಿದು ಬಂದಿದೆ. ಮೃತ ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತು ಪತ್ತೆಯಾಗಿದೆ. ಮಗುವಿನ ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ಇರಲಿಲ್ಲ ಎಂದು ತಿಳಿದು ಬಂದಿದೆ.
ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ, ಮಗುವಿಗೆ ಜ್ವರ ಇದ್ದ ಕಾರಣ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದ ವೇಳೆ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಬಾಲಕಿಯ ಸಾವಿನ ಸುತ್ತ ಹಲವು ಅನುಮಾನಗಳು ಸೃಷ್ಟಿಯಾಗಿವೆ.
ಸ್ಥಳಕ್ಕೆ ಅಜ್ಜಂಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಆಗಮಿಸಿ ತನಿಖೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: