ಚಿಕ್ಕಮಗಳೂರು ಮೂಲದ ಟೈಲ್ಸ್ ಅಂಗಡಿ ಮಾಲಿಕನ ಬರ್ಬರ ಹತ್ಯೆ
ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಟೈಲ್ಸ್ ಅಂಗಡಿ ಮಾಲಿಕನನ್ನು ತುಮಕೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದ ಅವರ ಟೈಲ್ಸ್ ಅಂಗಡಿಯಲ್ಲೇ ಬರ್ಬರ ಹತ್ಯೆ ನಡೆದಿದೆ.
ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಹತ್ಯೆಗೀಡಾದವರಾಗಿದ್ದಾರೆ. ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದ ಜಾಕೀರ್, 2 ತಿಂಗಳ ಹಿಂದೆಯಷ್ಟೇ ಯಲ್ಲಾಪುರದಲ್ಲಿ ಟೈಲ್ಸ್ ಅಂಗಡಿ ತೆರೆದಿದ್ದರು.
ಟೈಲ್ಸ್ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾಕೀರ್ ಅವರ ಸಹಾಯಕ ಖಾದರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw