ಮುಂಬೈ ದಾಳಿ: ಸಾಜಿದ್ ಮಿರ್ ನನ್ನು ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆ: ಕಾರಣವೇನು..?
26/11ರ ಮುಂಬೈ ದಾಳಿಯ ಸಂಚುಕೋರ, ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಸಂಘಟನೆಯ ಉಗ್ರ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವುದಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಸಲ್ಲಿಸಿದ್ದ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘1267 ಅಲ್ ಖೈದಾ ಸ್ಯಾಂಕ್ಷನ್ಸ್ ಕಮಿಟಿ’ಯ ಅಡಿಯಲ್ಲಿ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಬಗ್ಗೆ ಅಮೆರಿಕ ಪ್ರಸ್ತಾವ ಸಲ್ಲಿಸಿತ್ತು. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಕೂಡ ಸಾಜಿದ್ ಮಿರ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆಯೊಡ್ಡಿತ್ತು. ಮಿರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ.
26/11 ಮುಂಬೈ ದಾಳಿಯಲ್ಲಿ ಶಾಮೀಲಾದ ವಿಚಾರವಾಗಿ ಅಮೆರಿಕವು ಆತನ ಮೇಲೆ 5 ದಶಲಕ್ಷ ಡಾಲರ್ ಇನಾಮು ಘೋಷಿಸಿದೆ.
ಜೂನ್ ನಲ್ಲಿ, ಪಾಕಿಸ್ತಾನದ ಭಯೋತ್ಪಾದನಾ-ವಿರೋಧಿ ನ್ಯಾಯಾಲಯವು ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಮೀರ್ಗೆ 15 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw