‘ಮೇಕ್ ಇನ್ ಇಂಡಿಯಾ’ ವಿಫಲವಾಗಿದೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚೀನಾದಲ್ಲಿ ತಯಾರಿಸಿದ ಉತ್ಪನ್ನಗಳ ಮೇಲೆ ಭಾರತದ ಅವಲಂಬನೆ ರಾಷ್ಟ್ರೀಯ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಹೇಳಿ ಅವರು ಸರ್ಕಾರದ ನೀತಿಗಳನ್ನು ಟೀಕಿಸಿದ್ದಾರೆ.
‘ಮೇಕ್ ಇನ್ ಇಂಡಿಯಾ’ ವಿಫಲವಾಗಿದೆ ಮತ್ತು ದೇಶವು ಉತ್ಪಾದಿಸಲು ಸಿದ್ಧವಿಲ್ಲ ಎಂದು ಅವರು ಹೇಳಿದ್ದಾರೆ. “ಭಾರತವು ಈ ಕ್ರಾಂತಿಯನ್ನು ಮತ್ತೊಮ್ಮೆ ಚೀನೀಯರಿಗೆ ಬಿಟ್ಟುಕೊಡಲಿದೆ ಎಂದು ನಾನು ಚಿಂತಿತನಾಗಿದ್ದೇನೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
‘ಮೇಕ್ ಇನ್ ಇಂಡಿಯಾ’ ಉಪಕ್ರಮದ ವೈಫಲ್ಯದ ಪರಿಣಾಮವಾಗಿ ಭಾರತೀಯ ಭೂಪ್ರದೇಶದೊಳಗೆ ಚೀನಾದ ಉಪಸ್ಥಿತಿ ಇದೆ ಎಂದು ಅವರು ಆರೋಪಿಸಿದ್ದಾರೆ. ಭಾರತವು ಸಾಕಷ್ಟು ಉತ್ಪಾದಿಸುತ್ತಿಲ್ಲ. ಆರ್ಥಿಕ ದುರ್ಬಲತೆಯನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು.
“ಭಾರತವು ಈ ಕ್ರಾಂತಿಯನ್ನು ಮತ್ತೊಮ್ಮೆ ಚೀನಾಕ್ಕೆ ಒಪ್ಪಿಸುವ ಅಪಾಯವಿದೆ” ಎಂದು ಅವರು ಎಚ್ಚರಿಸಿದ್ದಾರೆ.
ಜನವರಿ 31 ರಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯ ಭೂಪ್ರದೇಶದೊಳಗೆ ಚೀನಾದ ಉಪಸ್ಥಿತಿಯ ಬಗ್ಗೆ ಸೇನಾ ಮುಖ್ಯಸ್ಥರ ಹೇಳಿಕೆಗಳನ್ನು ಉಲ್ಲೇಖಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj