ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ಇದೆಯೇ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬೆಳಗಾವಿ: ಕೊವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕ್ರಿಸ್ ಮಸ್ ಹಬ್ಬ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಹೊಸ ವರ್ಷಾಚರಣೆಗೆ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ.30ರಿಂದ ಜ.2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ ಎಂದು ತಿಳಿಸಿದರು.
ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಅರ್ಧದಷ್ಟು ಜನರಿಗೆ ಮಾತ್ರ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಟಾಕಿ ಒಂದು ಸಂಸ್ಕೃತಿ, ನಾನು ಕೇಡಿ ರವಿ ಅಲ್ಲ: ಡಿಕೆಶಿಗೆ ಸಿ.ಟಿ.ರವಿ ತಿರುಗೇಟು
ಎಂಇಎಸ್ ಖ್ಯಾತೆ: ಸಿದ್ದರಾಮಯ್ಯ, ಡಿಕೆಶಿ ಅವರಿಂದ ದ್ವಂದ್ವ ಹೇಳಿಕೆ; ಸಚಿವ ಈಶ್ವರಪ್ಪ ಆರೋಪ
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಪಾಕ್ ಕ್ರಿಕೆಟರ್ ವಿರುದ್ಧ ಎಫ್ ಐಆರ್
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆಗೈದ ಸ್ನೇಹಿತರು
ಓಮಿಕ್ರಾನ್ ಪ್ರಕರಣ: ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾಗುತ್ತಾ? | ತಜ್ಞರು ನೀಡಿದ ಸಲಹೆ ಏನು?
ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಕರ ಆಸ್ತಿ ಮುಟ್ಟುಗೋಲು: ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ