ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ - Mahanayaka

ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌

cm bommai
16/05/2023

ಬೆಂಗಳೂರು: ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇಂದು ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.


Provided by

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದರು.

ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರ ಪ್ರತಿಕ್ರಿಯಿಸಿ ಅವರು, ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ