ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ! - Mahanayaka
1:13 PM Wednesday 10 - September 2025

ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ರಿಯಲ್ ಎಸ್ಟೇಟ್ ಉದ್ಯಮಿ!

kantharaj roopa
23/09/2021

ಬೆಂಗಳೂರು: ಮಹಿಳೆಯೊಬ್ಬರನ್ನು ಪತಿಯೇ ಇರಿದು ಹತ್ಯೆ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದ್ದು, ಪತ್ನಿಯ ಶೀಲವನ್ನು ಶಂಕಿಸಿ ಪತಿ ಹತ್ಯೆ ಮಾಡಿದ್ದಾನೆ ಎನ್ನುವ ಅನುಮಾನಗಳು ಕೇಳಿ ಬಂದಿವೆ.


Provided by

ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ಆರೋಪಿಯಾಗಿದ್ದು, 34 ವರ್ಷ ವಯಸ್ಸಿನ ರೂಪಾ ಹತ್ಯೆಗೀಡಾದವರಾಗಿದ್ದಾರೆ. ಪತ್ನಿಯ ಶೀಲ ಶಂಕಿಸಿ ಕಾಂತರಾಜ್ ಆಗಾಗ ಜಗಳವಾಡುತ್ತಿದ್ದ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆಯೂ ಆಗಾಗ ಮನಸ್ತಾಪಗಳು ಉಂಟಾಗುತ್ತಿದ್ದವು.

ಬುಧವಾರ ಕಾಂತರಾಜ್ ತನ್ನ ಪತ್ನಿಯ ಮೊಬೈಲ್ ನ್ನು ಪರಿಶೀಲಿಸಿದಾಗ ಅದರಲ್ಲಿ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಪತ್ತೆಯಾಗಿತ್ತೆನ್ನಲಾಗಿದೆ. ಈ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ರೂಪಾಳನ್ನು ಕುತ್ತಿಗೆಗೆ ಇರಿದು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಇವರ ಪುತ್ರ ಮನೆಯಲ್ಲಿರಲಿಲ್ಲ. ಆತ ಟ್ಯೂಷನ್ ಮುಗಿಸಿ ವಾಪಸ್ಸಾಗುತ್ತಿದ್ದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು,  ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಅಂಗಡಿಗೆ ನುಗ್ಗಿ 2 ಗೋಣಿ ಸಿಗರೇಟ್. ಗುಟ್ಕಾ ಕಳವು ಮಾಡಿದ ಕಳ್ಳರು!

ಸಾಲ ತೀರಿಸಲು ಸಿಎಂನ ಪ್ರತಿಮೆಯನ್ನೇ ಮಾರಾಟಕ್ಕಿಟ್ಟ ಅಭಿಮಾನಿ!

ಗೋಬಿ ಮಂಚೂರಿ, ಎಗ್ ರೈಸ್ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ!

ರೇಣುಕಾಚಾರ್ಯ, ಕಾರಜೋಳ ಚಿರತೆ ಹಿಡಿಯುವುದರಲ್ಲಿ ಎಕ್ಸಪರ್ಟ್ ಗಳು | ಸದನದಲ್ಲಿ ಸ್ವಾರಸ್ಯಕರ ಚರ್ಚೆ

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದ ತಾಯಿ, ಮಗ ದಾರುಣ ಸಾವು

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

ಇತ್ತೀಚಿನ ಸುದ್ದಿ