ಪಿಯುಸಿ ಪಾಸ್ ಆದವರಿಗೆ  ಸಿಐಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: ಹುದ್ದೆಗಳು ಖಾಲಿ - Mahanayaka
1:10 PM Friday 13 - September 2024

ಪಿಯುಸಿ ಪಾಸ್ ಆದವರಿಗೆ  ಸಿಐಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: ಹುದ್ದೆಗಳು ಖಾಲಿ

cisf constable
23/08/2024

CISF Constable Recruitment 2024 — ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ( Central industrial security force) ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಭಾರತ ದೇಶಾದ್ಯಂತ 1,130 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 33 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಮೀಸಲಿಡಲಾಗಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿಸಿದ ಅರ್ಹತೆಗಳು, ವಯೋಮಿತಿ ಅರ್ಹತೆಗಳು ಹಾಗೂ ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎಂಬ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನೀಡಲಾಗಿದ್ದು ಉದ್ಯೋಗ ನಿರೀಕ್ಷೆಯಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ.

ವೇತನ — ಕಾನ್ಸ್ಟೇಬಲ್ ಆಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹21,600 ರೂಪಾಯಿ ಯಿಂದ ₹69,100 ರೂ. ವರೆಗೆ ವೇತನ ನೀಡಲಾಗುತ್ತದೆ.


Provided by

ಅರ್ಜಿ ಸಲ್ಲಿಕೆ ಆರಂಭ ಯಾವಾಗ ಮತ್ತು ಕೊನೆಯ ದಿನಾಂಕ ಯಾವಾಗ?

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಸಪ್ಟೆಂಬರ್ 30ರ ತನಕ ಅವಕಾಶ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆಗಳು ಹಾಗೂ ವಯೋಮಿತಿ ಅರ್ಹತೆಗಳು :

ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿ ಪಾಸಾಗಿರಬೇಕು. ಪಿಯುಸಿಯಲ್ಲಿ ಪ್ರಮುಖವಾಗಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮುಗಿಸಿರಬೇಕು. ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ 18ರಿಂದ 23 ವರ್ಷದ ವಯೋಮಿತಿಯಲ್ಲಿರಬೇಕು. ಇದರ ಅರ್ಥ ಅರ್ಜಿ ಸಲ್ಲಿಸುವವರು 2001 ರ ಅಕ್ಟೋಬರ್ 1 ರಿಂದ ಸಪ್ಟೆಂಬರ್ 30 2006ರ ಒಳಗೆ ಜನಿಸಿರುವಂಥವರು ಅರ್ಜಿ ಸಲ್ಲಿಸಲು ಅರ್ಹರು.

ಹುದ್ದೆಗಳಿಗೆ ಆಯ್ಕೆ ಹೇಗೆ ಮಾಡಿಕೊಳ್ಳಲಾಗುವುದು?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಇದರಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪ್ರಕ್ಷ ನಡೆಸಲಾಗುತ್ತದೆ.

ಅರ್ಜಿ ಶುಲ್ಕ ಮಾಹಿತಿ :

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು ಉಳಿದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಿದೆ.

ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ : https://cisfrectt.cisf.gov.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ