ಊಟದ ವಿಚಾರಕ್ಕೆ ಕಾರ್ಮಿಕರ ನಡುವೆ ಹೊಡೆದಾಟ: ಓರ್ವ ಸಾವು

surathkal police
13/02/2023

ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ  ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್‌ ಸಂಸ್ಥೆಯ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ.

ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಅದು ಅತಿರೇಕಕ್ಕೆ ತೆರಳಿ ಹೊಡೆದಾಡಿಕೊಂಡಿದ್ದಾರೆ.

ಹೊಡೆದಾಟದಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಸುರತ್ಕಲ್‌ ಪೊಲೀಸರು ಐಪಿಸಿ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version