ಸಿಎಂ ಬದಲಾವಣೆ ಇಲ್ಲ: ಕಾಂಗ್ರೆಸ್ ಟ್ವೀಟ್ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.
ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಛಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲವೂ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿಯವ್ರೇ ಪೂರ್ಣವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka