ಸಿಎಂ ಬೊಮ್ಮಾಯಿಯನ್ನು ಡ್ರೈವಿಂಗ್ ಮಾಡೋದು ಯಡಿಯೂರಪ್ಪ | ಸಿದ್ದರಾಮಯ್ಯ
ಬೆಂಗಳೂರು: ಬೊಮ್ಮಾಯಿಯನ್ನು ಸಿಎಂ ಮಾಡಿರೋದು ಆರೆಸ್ಸೆಸ್ ನವರು. ಈಗ ಬೊಮ್ಮಾಯಿ ಸಿಎಂ ಆಗಿದ್ದರೂ ಅವರನ್ನು ಡೈವಿಂಗ್ ಮಾಡೋದು ಬಿ.ಎಸ್.ಯಡಿಯೂರಪ್ಪ ಮತ್ತು ಆರೆಸ್ಸೆಸ್ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಮಾಜಿ ಸಿಎಂ ಆರ್.ಗುಂಡೂರಾವ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಆರೆಸ್ಸೆಸ್ ನವರು ಮೊದಲು ಚಡ್ಡಿ ಹಾಕಿಕೊಂಡು ದೊಣ್ಣೆ ಹಿಡಿದು ಬರುತ್ತಿದ್ದರು. ಆರೆಸ್ಸೆಸ್ ನವರು ದೇಶ ಭಕ್ತರಲ್ಲ. ದೇಶಕ್ಕಾಗಿ ಬಿಜೆಪಿಯ ಯಾರೊಬ್ಬರೂ ಸತ್ತಿಲ್ಲ. ಬಿಜೆಪಿಯವರು ಬಡವರು, ದಲಿತ ವಿರೋಧಿಗಳು. ಇವರಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬರಬೇಕು. ಬಿಜೆಪಿಯವರೇ ತಾಲಿಬಾನಿಗಳು ಹಾಗಾಗಿ ಜನರು ಹುಷಾರಾಗಿರಬೇಕು ಎಂದು ಎಚ್ಚರಿಸಿದರು.
ಉದ್ಯೋಗ ಕೇಳಿದರೆ ಪಕೋಡ ಮಾರಿ ಅಂತಾರೆ. ಪಕೋಡಾ ಮಾಡಿ ಮಾರಲು ಎಣ್ಣೆ ಬೆಲೆಯೂ ಹೆಚ್ಚಾಗಿದೆ. ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದರೆ, ನಿಮ್ಮ ಕಾಲದಲ್ಲಿ ಬೆಲೆ ಏರಿಕೆ ಆಗಿಲ್ವಾ ಎಂದು ಸಿಎಂ ಬೊಮ್ಮಾಯಿ ಕೇಳ್ತಾರೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೀಡಾಗಿ, ಕಣ್ಣೀರಿಡುತ್ತಿದ್ದರೂ ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇವರಿಗೆ ಅಧಿಕಾರವೇ ಮುಖ್ಯವಾಗಿದೆ ಹೊರತು ಜನರ ಹಿತ ಮುಖ್ಯವಲ್ಲ. ಬಿಜೆಪಿ ಸರ್ಕಾರ ಮಾನ ಮರ್ಯಾದೆ ಇಲ್ಲದ ಸರ್ಕಾರ, ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಪ್ರಧಾನಿ ನರೇಂದ್ರ ಮೋದಿ
ಪುರುಷರ ಒಳ ಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ: ಸೃಷ್ಟಿಯಾಯ್ತು ಹೊಸ ವಿವಾದ
ಪ್ರೇಯಸಿಯ ಕೈಕಾಲು ಕಟ್ಟಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಿಯಕರ!
ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ | ಭಾರತ್ ಬಂದ್ ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ಆಟಿಕೆ ಗನ್ ತೋರಿಸಿ ಕಾರನ್ನೇ ಅಪಹರಿಸಿದ್ದ ಐವರು ಅರೆಸ್ಟ್!
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಕ್ಯಾಂಪಸ್ ಫ್ರಂಟ್ ತಹಶೀಲ್ದಾರ್ ಕಚೇರಿಗೆ ಮಾರ್ಚ್