ಸಿದ್ದರಾಮಯ್ಯ, ಸಿಎಂ ಇಬ್ರಾಹಿಂ ಬೈದಾಡಿಕೊಳ್ಳುತ್ತಿರುವ ವಿಡಿಯೋ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು ಗೊತ್ತಾ?
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ಈ ವಿಡಿಯೋಗೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಸಿಎಂ ಇಬ್ರಾಹಿಂ, ತಿರುಚಿದ ವಿಡಿಯೋವನ್ನು ವೈರಲ್ ಮಾಡಲಾಗಿದ್ದು, ಈ ವಿಡಿಯೋವನ್ನೇ ಬ್ರಾಡ್ ಕಾಸ್ಟ್ ಮಾಡಲಾಗಿದೆ. ಇದು ಭಾರೀ ನೀಚವಾಗಿರುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರಿಗೆ ಧೈರ್ಯವಾಗಿ ಎದುರಿಗೆ ಬಂದು ನಿಂತು ಹೋರಾಟ ಮಾಡುವ ಶಕ್ತಿ ಇಲ್ಲವೋ, ಅಂತಹ ಜನ ಈ ಕೆಲಸವನ್ನು ಮಾಡಿದ್ದಾರೆ. ಆದ್ದರಿಂದ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಲು ಕಾರಣವಾಗಿದೆ. ಈ ಬಗ್ಗೆ ನಿನ್ನೆಯೇ ನಾನು ಇದಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ಅಂದುಕೊಂಡಿದ್ದೆ. ಆದರೆ ಸಾಧ್ಯವಾಗಲಿಲ್ಲ. ಈ ವಿಡಿಯೋದಲ್ಲಿ ಏನು ಬಿಂಬಿಸಲಾಗಿದೆ ಅದು ತಪ್ಪು ಎಂದರು.
ಈ ವಿಡಿಯೋವನ್ನು ತಿರುಚಿ ಪ್ರಸಾರ ಮಾಡಿದವರ ವಿರುದ್ಧ ನಾನು ಈಗಾಗಲೇ ಸೈಬರ್ ಠಾಣೆಗೆ ದೂರು ದಾಖಲಿಸಿದ್ದು, ಅವರು ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಸಿಎಂ ಇಬ್ರಾಹಿಂ ಇದೇ ವೇಳೆ ಸ್ಪಷ್ಟನೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅತ್ಯಾಚಾರದ ಬಗ್ಗೆ ವ್ಯಂಗ್ಯ: ಸ್ಪೀಕರ್ ಕಾಗೇರಿ ಕ್ಷಮೆ ಕೇಳುವುದಿಲ್ಲವೇ? ಎಂಬ ಪ್ರಶ್ನೆಗೆ ನಿರುತ್ತರವಾದ ಯಡಿಯೂರಪ್ಪ
“ರೇಪ್ ತಡೆಯಲು ಆಗದಿದ್ದರೆ, ಮಲಗಿ ಎಂಜಾಯ್ ಮಾಡಬೇಕು” | ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ರಮೇಶ್ ಕುಮಾರ್
ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ!
ಕುಟುಂಬ ರಾಜಕಾರಣ: ವಿಧಾನ ಪರಿಷತ್ ತುಂಬ ರಾಜಕಾರಣಿಗಳ ಕರುಳ ಕುಡಿಗಳು
ಮೊಟ್ಟೆ ವಿತರಣೆ ಕೈಬಿಡಿ, ಇಲ್ಲವೇ ಪ್ರತ್ಯೇಕ ವೆಜ್- ನಾನ್ ವೆಜ್ ಶಾಲೆ ತೆರೆಯಿರಿ | ದಯಾನಂದ ಸ್ವಾಮೀಜಿ ಒತ್ತಾಯ