ಸಿಎಂ ರಾಜೀನಾಮೆ ಹೇಳಿಕೆ ನೀಡಿರುವುದರಲ್ಲಿ ತಪ್ಪಿಲ್ಲ:  ಸಚಿವ ಬಿ.ಸಿ. ಪಾಟೀಲ್ ಹೇಳಿದ್ದೇನು?

b c patil
07/06/2021

ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಯಡಿಯೂರಪ್ಪನವರು ನೊಂದಿದ್ದಾರೆ. ಆದ್ದರಿಂದಲೇ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಮಾತುಗಳನ್ನಾಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಪತ್ರಕರ್ತರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಅವರು ಯಡಿಯೂರಪ್ಪರನ್ನು ಸಮರ್ಥಿಸಿಕೊಂಡರು.

ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ತಪ್ಪಿಲ್ಲ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆಯೇ ಹೊರತು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version