ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?
ಬೆಂಗಳೂರು: ಯಡಿಯೂರಪ್ಪನವರ ಉತ್ತರಾಧಿಕಾರಿಯಾಗಿ ಸಿಎಂ ಸ್ಥಾನವನ್ನು ಅಲಂಕರಿಸಿದ ಬಸವರಾಜ್ ಬೊಮ್ಮಾಯಿ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ಪಾಳಯದಿಂದಲೇ ಕೇಳಿ ಬರುತ್ತಿದೆ. ಈ ನಡುವೆ ಮತ್ತೊಂದು ರೀತಿಯ ಚರ್ಚೆ ಆರಂಭವಾಗುತ್ತಿದೆ. ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡುವುದು ಪಕ್ಕಾ ಎಂಬಂತಹ ಚರ್ಚೆಗಳು ನಡೆಯುತ್ತಿದೆ.
ಹೌದು…! ಸದ್ಯ ಕೇಳಿ ಬರುತ್ತಿರುವ ಚರ್ಚೆಗಳ ಪ್ರಕಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜನವರಿಯಲ್ಲಿಯೇ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮುಂದಿನ ತಿಂಗಳಿನಲ್ಲಿ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಚರ್ಚೆಯಾಗುತ್ತಿರುವ ವಿಚಾರಗಳ ಪ್ರಕಾರ, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿನೋವಿನಿಂದ ಬಳಲುತ್ತಿದ್ದು, ಹೀಗಾಗಿ ಅವರು ಉನ್ನತ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಮೆರಿಕಾದಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದು, ಹೀಗಾಗಿ ವೀಸಾಕ್ಕೂ ಅವರು ಅರ್ಜಿಸಲ್ಲಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿಎಂ ಅವರು ವೈದ್ಯರ ಜೊತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದೂ ಹೇಳಲಾಗಿದೆ. ಬೆಳಗಾವಿ ಅಧಿವೇಶನ ಮುಗಿಯುವುದರೊಳಗೆ ವೀಸಾ ಅನುಮತಿಯನ್ನು ಅವರು ಪಡೆಯಲಿದ್ದಾರೆ ಎನ್ನಲಾಗಿದೆ. ಜನವರಿ ಅಂತ್ಯದೊಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬೊಮ್ಮಾಯಿ ಅಮೆರಿಕಾಕ್ಕೆ ಪ್ರಯಾಣಿಸಲಿದ್ದಾರೆ. 3 ತಿಂಗಳ ಕಾಲ ಅವರಿಗೆ ವಿಶ್ರಾಂತಿ ಕಡ್ಡಾಯವಾಗಿರುವುದರಿಂದಾಗಿ ಸಿಎಂ ಇಲ್ಲದೇ 3 ತಿಂಗಳು ಎಲ್ಲವನ್ನೂ ನಿಭಾಯಿಸುವುದು ಕಷ್ಟ ಎನ್ನಲಾಗುತ್ತಿದೆ. ಜೊತೆಗೆ ಆ ಬಳಿಕವೂ ಸತತ ಪ್ರಯಾಣಗಳನ್ನು ಮಾಡುವುದು ಕೂಡ ಕಷ್ಟಕರವಾಗುತ್ತದೆ ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳೇ ಹೆಚ್ಚು ಎಂದು ವರದಿಯಾಗಿದೆ.
ಇತ್ತೀಚೆಗಷ್ಟೆ ಸಚಿವ ಕೆ.ಎಸ್.ಈಶ್ವರಪ್ಪನವರು ಕೂಡ ಸಿಎಂ ಬದಲಾವಣೆಯ ಬಗ್ಗೆ ಮಾತನಾಡಿರುವುದು ಭಾರೀ ಚರ್ಚೆಗೀಡಾಗಿತ್ತು. ಆದರೆ, ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿ ಬಂದಿದೆ. ಜನವರಿ ಅಂತ್ಯದೊಳಗೆ ಈ ಎಲ್ಲ ಚರ್ಚೆಗಳಿಗೆ ಅಂತಿಮ ತೆರೆ ಬೀಳುವ ಸಾಧ್ಯತೆಗಳಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶಪಡಿಸಲು ಆದೇಶ
ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪೂಜಾರಿ: ಮಹಿಳೆಯ ದಾರುಣ ಸಾವು
1 ಲೀಟರ್ ಕತ್ತೆಯ ಹಾಲಿಗೆ 10 ಸಾವಿರ ರೂಪಾಯಿ! | ಒಂದು ಚಮಚ ಕತ್ತೆಯ ಹಾಲಿಗೆ 100 ರೂಪಾಯಿ!
ವಿಶ್ವ ಮಾನವ ಹಕ್ಕುಗಳ ದಿನಾಚರಣೆ | ಸಂತ್ರಸ್ತರ ಪಾಲಿನ ಆಶಾಕಿರಣ ‘ಸಿಕ್ರಂ’: ಡಾ.ದೇವರಾಜು.ಎಸ್.ಎಸ್.
ವಾಹನ ಇನ್ಸೂರೆನ್ಸ್ ನೆಪದಲ್ಲಿ ಕರೆದು ಶ್ರೀರಾಮಸೇನೆಯ ಕಾರ್ಯಕರ್ತನಿಗೆ ಹಲ್ಲೆ