ವಯನಾಡ್ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ ಘೋಷಿಸಿದ ಸಿಎಂ ಸಿದ್ದರಾಮಯ್ಯ - Mahanayaka
9:47 PM Thursday 19 - September 2024

ವಯನಾಡ್ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ ಘೋಷಿಸಿದ ಸಿಎಂ ಸಿದ್ದರಾಮಯ್ಯ

c m siddaramaya
03/08/2024

ಬೆಂಗಳೂರು: ವಯನಾಡಿನಲ್ಲಿ ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ 100 ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಸಂಕಷ್ಟದಲ್ಲಿ, ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಕರ್ನಾಟಕವು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ಒಟ್ಟಾಗಿ ನಾವು ಪುನರ್ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಕೃತಜ್ಞತೆ:


Provided by

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೃತಜ್ಞತೆ ತಿಳಿಸಿದ್ದು, ವಯನಾಡ್ ನಲ್ಲಿನ ಈ ಕಷ್ಟದ ಸಮಯದಲ್ಲಿ ಉದಾರವಾದ ಬೆಂಬಲಕ್ಕಾಗಿ ನಾನು ಕರ್ನಾಟಕ ಜನರಿಗೆ ಮತ್ತು ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ. ದುರಂತ ಭೂಕುಸಿತದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸುವ ನಿಮ್ಮ ಬದ್ಧತೆಯು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ