ಹನಿಟ್ರ್ಯಾಪ್ ಗದ್ದಲದ ನಡುವೆ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಆರೋಪ, ಪ್ರತ್ಯಾರೋಪಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯನವರು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ ನಡೆಸಿದರು.
ತನ್ನ ಮೇಲೆ ಹನಿಟ್ರ್ಯಾಪ್ ಗೆ ಯತ್ನಿಸಲಾಗಿದೆ ಎಂದು ಕೆ.ಎನ್.ರಾಜಣ್ಣ ಬಜೆಟ್ ಅಧಿವೇಶನದ ಕೊನೆಯ ದಿನ ಸದನದಲ್ಲಿ ಆರೋಪ ಮಾಡಿದ್ದರು. ಇದು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣಾಗಿತ್ತು.
ಖರ್ಗೆ ಅವರ ಭೇಟಿ ವೇಳೆ ಹನಿಟ್ರ್ಯಾಪ್ ವಿಚಾರ ಚರ್ಚೆ ನಡೆಸಲಾಗಿದೆ. ಘಟನೆಯ ಎಲ್ಲ ವಿವರಗಳನ್ನು ಸಿಎಂ, ಎಐಸಿಸಿ ಅಧ್ಯಕ್ಷರಿಗೆ ನೀಡಿದ್ದಾರೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: