ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ಬಾಕಿ ಅನುದಾನಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯನವರು ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.
ಇದೇ ವೇಳೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿಎಂ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw