ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ ಯಡಿಯೂರಪ್ಪಗೆ ಜ್ವರ, ಸುಸ್ತು!

yediyurappa
15/04/2021

ಬೆಳಗಾವಿ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಜ್ವರ, ಸುಸ್ತು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಬೆಳಗಾವಿಯ ಹೊಟೇಲ್ ನಲ್ಲಿ ಅವರು ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಬೆಳಗಾವಿಯ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದರು.

ಅವರಿಗೆ ಜ್ವರ ಮತ್ತು ಸುಸ್ತು ಆಗಿದ್ದು ರಾತ್ರಿ ಕೆಎಲ್‌ ಇ ಆಸ್ಪತ್ರೆಯ ಇಬ್ಬರು ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಸಿಎಂಗೆ ಮಾತ್ರೆ ನೀಡಿದ್ದು ಸಿಎಂ ತಮ್ಮ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಅವರ ಆರೋಗ್ಯ ತಪಾಸಣೆಗೆ ಬಿಮ್ಸ್ ವೈದ್ಯರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ಜ್ವರ ಇದ್ದರೂ ಸಿಎಂ ಯಡಿಯೂರಪ್ಪ ಗೋಕಾಕ್ ಮತ್ತು ಮೂಡಲಗಿಯಲ್ಲಿ ಪ್ರಚಾರ ನಡೆಸಿದ್ದರು. ಇವತ್ತು ವಿಶ್ರಾಂತಿ ಬಳಿಕ ಬೆಳಗಾವಿಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version