ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ - Mahanayaka

ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

heat wave
09/03/2023

ಕರಾವಳಿಯ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


Provided by

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9, 10 ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ.

ಕೆಲ ಕಡೆಗಳಲ್ಲಿನ ಉಷ್ಣಾಂಶವು 40 ಗಡಿಗೆ ತಲುಪಿದೆ. ಬಿಸಿಲಿನ ತಾಪಕ್ಕೆ ಜನ ನಡೆದಾಡಲೂ ಸಂಕಷ್ಟ ಪಡುವಂತಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ.‌ ಮನೆಯಿಂದ ಹೊರಗೆ ಬಾರದೇ ಕಷ್ಟಪಡಬೇಕಾದ ಸ್ಥಿತಿ ಇದೆ.


Provided by

ಕಳೆದ ಕೆಲ ದಿನಗಳ ಹಿಂದಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿ ಗಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಇದೀಗ ಮತ್ತೆ ಹವಾಮಾನ ಇಲಾಖೆಯು ಬಿಸಿ ಗಾಳಿಯ ಎಚ್ಚರಿಕೆ ನೀಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ