ಕೊಲಂಬಿಯಾದಲ್ಲಿ ಆರು ತಿಂಗಳವರೆಗೆ ಗರ್ಭಪಾತ ಅಪರಾಧವಲ್ಲ: ನ್ಯಾಯಾಲಯದ ಮಹತ್ವದ ತೀರ್ಪು
ಕೊಲಂಬಿಯಾ: ಕೊಲಂಬಿಯಾದಲ್ಲಿ ಆರು ತಿಂಗಳವರೆಗಿನ ಗರ್ಭಪಾತವನ್ನು ಅಪರಾಧಮುಕ್ತಗೊಳಿಸಲಾಗಿದೆ. ಈ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಅಲ್ಲಿನ ಉಚ್ಛ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
9 ನ್ಯಾಯಾಧೀಶರಿದ್ದ ನ್ಯಾಯಪೀಠವು ಈ ಕಾನೂನಿನ ಪರ ಮತ ಚಲಾಯಿಸಿದೆ. ನ್ಯಾಯಮಂಡಳಿಯು ಈ ಕಾನೂನಿನ ಪರ ಮತ ಚಲಾಯಿಸುವ ಮುನ್ನ, ಮಹಿಳೆಯು ಪ್ರಾಣಾಪಾಯದಲ್ಲಿದ್ದಾಗ, ಭ್ರೂಣ ವಿರೂಪಗೊಂಡಾಗ ಅಥವಾ ಅತ್ಯಾಚಾರ ಪ್ರಕರಣದಲ್ಲಿ ಗರ್ಭಧಾರಣೆ ಹೊಂದಿದ್ದರೆ 24 ವಾರಗಳವರೆಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಹೇಳಿದೆ.
ಇದು ಗರ್ಭಪಾತದ ವಿರೋಧಿಸುವ ಸಂಘಟನೆಗಳಿಗೆ ಹಿನ್ನಡೆ ಉಂಟು ಮಾಡಿದ್ದರೆ, ಮಹಿಳಾ ಹಕ್ಕುಗಳ ಸಂಘಟನೆಗಳು ‘ಐತಿಹಾಸಿಕ ನಿರ್ಧಾರ’ ಎಂದು ಬಣ್ಣಿಸಿವೆ.
ನ್ಯಾಯಾಲಯ ಮಹತ್ವದ ತೀರ್ಪುನಿಂದಾಗಿ ಕೊಲಂಬಿಯಾದಲ್ಲಿ ಮಹಿಳೆಯರು 24 ವಾರಗಳವರೆಗೆ ಗರ್ಭಪಾತ ಮಾಡಿಸಿಕೊಳ್ಳುವ ಅವಕಾಶ ಪಡೆದಂತಾಗಿದೆ.
ಈ ಕಾನೂನಿನ ತರುವಾಯ ದೇಶದಲ್ಲಿ ಪ್ರತಿವರ್ಷ 4 ಲಕ್ಷಕ್ಕೂ ಅಧಿಕ ಗರ್ಭಪಾತಗಳು ನಡೆಯಲಿವೆ ಎಂದು ಅಂದಾಜಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಿನ್ನದ ಗಣಿಯಲ್ಲಿ ಸ್ಫೋಟ: 59 ಮಂದಿ ಸಾವು; ನೂರಕ್ಕೂ ಹೆಚ್ಚು ಮಂದಿಗೆ ಗಾಯ
ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷ ಭಯೋತ್ಪಾದಕ ಎಂದ ವಿದೇಶಿ ಪತ್ರಕರ್ತ: ಡಿಜಿಪಿ ಸ್ಪಷ್ಟನೆ