ಕಾಲೇಜಿನಿಂದ ಡಿಬಾರ್: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಡಿಕೊಂಡಿರುವ ಘಟನೆ ನಡೆದಿದೆ.
ಭವ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್ ಮಾಡಲಾಗಿತ್ತು. ಇದರಿಂದ ಮನನೊಂದು ತನ್ನ ಸಹೋದರಿ ದಿವ್ಯಾಗೆ ಕರೆ ಮಾಡಿ, ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ. ಹೀಗಾಗಿ, ತಾನು ಬದುಕುವುದಿಲ್ಲ ಎಂದು ಲೇಡಿಸ್ ಪಿಜಿ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ವಿಚಾರವನ್ನು ಭವ್ಯಾಳ ಸಹೋದರಿ ದಿವ್ಯಾ ತಂದೆಗೆ ತಿಳಿಸಿದ್ದಾಳೆ. ಆದರೆ, ಆಕೆಯ ತಂದೆ ಮುಳಬಾಗಿಲಿನಿಂದ ಪಿಜಿ ಬಳಿ ಬರುತ್ತಿದ್ದಂತೆ ಪೊಲೀಸರು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕರೆ ಮಾಡಿದ್ದಾರೆ. ಈ ಸಂಬಂಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶೇನ್ ವಾರ್ನ್ ಹಠಾತ್ ನಿಧನಕ್ಕೆ ಕಾರಣವೇನು?
ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ನಿಧನ
ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿತ:10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ
ಮಸೀದಿಯಲ್ಲಿ ನಮಾಜ್ ವೇಳೆ ಬಾಂಬ್ ಸ್ಫೋಟ: 30 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ