ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕರ ತಲೆಯ ಮೇಲೆ ಬಿದ್ದ ಸಿಮೆಂಟ್ ಕಂಬ!

17/12/2020

ರಾಜಸ್ಥಾನ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿರ್ಮಾಣ ಹಂತದ ಕಟ್ಟಡದ ಸಿಮೆಂಟ್ ಕಂಬವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ರಾಜಸ್ಥಾನ ಭರತ್ ಪುರದ ಸರಫಾ ಮಾರುಕಟ್ಟೆಯ ರಸ್ತೆಯಲ್ಲಿ ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸಿಮೆಂಟ್ ಕಂಬ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ. ಗಾಯಗೊಂಡ ಯುವಕನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version