ಬಾಡಿಗೆ ಕೇಳುವ ನೆಪದಲ್ಲಿ ಬಂದು ವೃದ್ಧೆಗೆ ಹಲ್ಲೆ ಮಾಡಿ, ಚಿನ್ನದ ಸರ ಸುಲಿಗೆ
ಬೆಂಗಳೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ವೃದ್ಧೆಗೆ ಹಲ್ಲೆ ಮಾಡಿ, ಚಿನ್ನದ ಸರ ಸುಲಿಗೆ ಮಾಡಿದ ಆರೋಪಿತೆಯನ್ನು ಬಂಧಿಸಿ 20 ಗ್ರಾಂ ಚಿನ್ನಸ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಶಾಂತಮ್ಮ, 60 ವರ್ಷ ರವರು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲು ಈಕೆ ಒಂಟಿಯಾಗಿ ವಾಸವಿದ್ದು, ಈಕೆಯ ಮನೆಗೆ ಒಬ್ಬ ಅಪರಿಚಿತ 38–40 ವರ್ಷದ ಮಹಿಳೆಯೊಬ್ಬಳು ಶಾಂತಮ್ಮರವರ ಮನೆಗೆ ಆಗಾಗ್ಗೆ ಮನೆ ಬಾಡಿಗೆ ಇದೆಯೇ ಎಂದು ಕೇಳುವ ನೆಪದಲ್ಲಿ ಬರುತ್ತಿದ್ದು, ದಿನಾಂಕ 25 ರಂದು ಬೆಳಗ್ಗೆ 09:30 ಗಂಟೆಯಿಂದ 12 ಗಂಟೆಯ ನಡುವೆ ಮನೆಗೆ ಬಂದು ಹಾಲನ್ನು ಉಕ್ಕಿಸುವುದಾಗಿ ಅಡುಗೆ ಮನೆಗೆ ಪಿರಾದಿಯನ್ನು ಕರೆದುಕೊಂಡು ಹೋಗಿ ದೊಣ್ಣೆಯಿಂದ ತಲೆಗೆ ಹೊಡೆದು ಆಕೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾಳೆ. ಈ ಸಂಬಂಧ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪಾರಣ ದಾಖಲಾಗಿರುತ್ತದೆ.
ಈ ಪ್ರಕರಣದ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು ಕೃತ್ಯ ನಡೆದ ಸ್ಥಳವನ್ನು ಪರಿಶೀಲಿಸಿ, ಒಂಟಿಯಾಗಿ ವಾಸವಿದ್ದ ವೃದ್ಧ ಮೇಲೆ ನಡೆದಿರುವ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ನಂದಿನಿಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್’ಪೆಕ್ಟರ್ ರವರ ನೇತೃತ್ವದಲ್ಲಿ ಒಂದು ತಂಡವನ್ನು ರಚಿಸಿ ತಂಡವು ಕೃತ್ಯ ನಡೆದ ಸ್ಥಳದ ಅಕ್ಕಪಕ್ಕವಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿತೆಯ ಚಹರೆಗಳನ್ನು ಪಡೆದುಕೊಂಡು ಈ ಕೃತ್ಯದಲ್ಲಿ ಭಾಗಿಯಾಗಿದ್ದ ಲಕ್ಷ್ಮೀ @ ಗಂಗಾ, 38 ವರ್ಷ ಎಂಬಾಕೆಯನ್ನು ದಸ್ತಗಿರಿ ಮಾಡಿ ಮಾಹಿತಿ ಮೇರೆಗೆ ಸುಲಿಗೆ ಮಾಡಿದ್ದ ಸುಮಾರು 80 ಸಾವಿರ ರೂ. ಬೆಲೆ ಬಾಳುವ 20 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳುವಲ್ಲಿ ನಂದಿನಿಲೇಔಟ್ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw