ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು - Mahanayaka
10:12 PM Thursday 14 - November 2024

ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು

ramesh gunavati suvarna
17/08/2021

ಮಂಗಳೂರು: ಕೊವಿಡ್ ತಗುಲಿದೆ ಎಂಬ ಭಯ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನ ಕುಳಾಯಿ ಚಿತ್ರಾಪುರದ ಬಳಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಗರದ ಪೊಲೀಸ್ ಕಮಿಷನರ್ ಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಾರೆ.

ರಮೇಶ್ ಸುವರ್ಣ ಹಾಗೂ ಗುಣವತಿ ಸುವರ್ಣ ಆತ್ಮಹತ್ಯೆಗೆ ಶರಣಾಗಿರುವ ದಂಪತಿಯಾಗಿದ್ದು, ತಾನು ತೀವ್ರವಾದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿ ದಿನಕ್ಕೆ ಎರಡು ಇನ್ಸುಲಿನ್ ಇಂಜೆಕ್ಷನ್ ಪಡೆದುಕೊಂಡರೂ ಸಕ್ಕರೆ ಖಾಯಿಲೆ ಹತೋಟಿಗೆ ಬರುತ್ತಿಲ್ಲ. ಇದೆಲ್ಲರ ಜೊತೆಗೆ ಜೊತೆಗೆ ಔಷದದ ಅಲರ್ಜಿ ಇದ್ದ ಮೆಡಿಸಿನ್ ಕೂಡಾ ದೇಹಕ್ಕೆ ಒಗ್ಗಿಕೊಳ್ಳುತ್ತಿಲ್ಲ. ಎರಡು ಬಾರಿ ಗರ್ಭಿಣಿಯಾದರೂ ಸಮಸ್ಯೆ ಕಾಣಿಸಿಕೊಂಡು ಮಕ್ಕಳಾಗಿಲ್ಲ. ಮೊದಲ ಮಗು 13 ದಿನದಲ್ಲಿ ಮೃತಪಟ್ಟಿತ್ತು. ನಾವು 2000 ಇಸವಿಯಲ್ಲಿ ಮದುವೆಯಾಗಿದ್ದು ಸದ್ಯ ನನಗೂ ನನ್ನ ಗಂಡನಿಗೂ ಕೋವಿಡ್ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಬ್ಲ್ಯಾಕ್ ಫಂಗಸ್ ನಿಂದ ಕಣ್ಣು ಮತ್ತು ಇತರ ಭಾಗಗಳನ್ನು ಕಳೆದುಕೊಂಡಿದ್ದನ್ನು ನೋಡಿದಾಗ, ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ನನಗೂ ಭಯ ಕಾಡುತ್ತಿದೆ. ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ ಎಂದು ದಂಪತಿ ತಮ್ಮ ಕೊನೆಯ ಸಂದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಧ್ವನಿ ಮುದ್ರಣ ಬಂದ ತಕ್ಷಣವೇ, ಕಮಿಷನರ್ ಅವರು ವ್ಯಕ್ತಿ ಕರೆ ಮಾಡಿದ್ದಾರೆ.  ಆದರೆ ಆ ಕಡೆಯಿಂದ ಕರೆ ಸ್ವೀಕರಿಸದ ಕಾರಣ ಪೊಲೀಸ್ ಕಮಿಷನರ್ ಪುನಃ ಧ್ವನಿ ಮುದ್ರಣ‌ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ಳದಂತೆ ವಿನಂತಿಸಿದ್ದರು. ಮತ್ತು ಆ ವ್ಯಕ್ತಿಯ ಬಗ್ಗೆ ತಿಳಿದವರು ಅವರನ್ನು ರಕ್ಷಿಸುವಂತೆ ವಿ‌ನಂತಿಸಿದ್ದರು. ಅವರು ಇರುವ ಸ್ಥಳದ ಲೊಕೇಷನ್ ಪತ್ತೆ ಮಾಡುವಲ್ಲಿ ಪೊಲೀಸರು ಸಾಕಷ್ಟು ಶ್ರಮಪಟ್ಟರು. ಪಣಂಬೂರಿನ ಚಿತ್ರಾಪುರ ಬೀಚ್ ರಸ್ತೆಯಲ್ಲಿರುವ ಫ್ಲ್ಯಾಟ್ ಪತ್ತೆ ಮಾಡಿ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಮ್ಮ ಅಂತ್ಯ ಸಂಸ್ಕಾರಕ್ಕೆ 1 ಲಕ್ಷ ರೂ. ಹಣ ತೆಗೆದು ಇಟ್ಟಿದ್ದೇವೆ. ಸತ್ಯಜಿತ್ ಸುರತ್ಕಲ್, ಶರಣ್ ಪಂಪ್ ವೆಲ್ ನಮ್ಮ ಅಂತ್ಯ ಸಂಸ್ಕಾರ ಮಾಡಲಿ ಎಂದು ಪತ್ನಿ ಗುಣ ಸುವರ್ಣ ಡೆತ್ ನೋಟ್ ಬರೆದು ಇಟ್ಟಿದ್ದಾರೆ.




ಇನ್ನಷ್ಟು ಸುದ್ದಿಗಳು…

 

4 ಕಾರು, 1 ಹೆಲಿಕಾಫ್ಟರ್ ನಲ್ಲಿ ಹಣ ತುಂಬಿಸಿಕೊಂಡು ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಪರಾರಿ

ಸಣ್ಣ ಮೀನುಗಳು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ 

ಮಂಗಳೂರಿನಲ್ಲಿ 1,725 ಕೆ.ಜಿ. ಅಪಾಯಕಾರಿ ಸ್ಫೋಟಕ ಪತ್ತೆ! | ಆರೋಪಿ ಅರೆಸ್ಟ್

ಅಫ್ಘಾನ್ ಬಿಕ್ಕಟ್ಟು: ವಿಮಾನ ನಿಲ್ದಾಣದಲ್ಲಿ ಯು.ಎಸ್. ಅಧಿಕಾರಿಗಳ ಗುಂಡೇಟಿಗೆ ಐವರು ಬಲಿ

ವೀರ ಸಾರ್ವರ್ಕರ್ ರಥಯಾತ್ರೆ ನಡೆಸುತ್ತೇವೆ ತಾಕತ್ ಇದ್ದರೆ ತಡೆಯಿರಿ | ಎಸ್ ಡಿಪಿಐಗೆ ಹಿಂದುತ್ವ ಸಂಘಟನೆಗಳ ಸವಾಲು

ಗಲಭೆ ಸೃಷ್ಟಿಸಲು ಮುಂದಾದರೆ, ಸಂವಿಧಾನ ಬದ್ಧವಾಗಿ ತಡೆಯಲು ಸಿದ್ಧ | ಸಂಘಪರಿವಾರಕ್ಕೆ ಪಿಎಫ್ ಐ ತಿರುಗೇಟು

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು!

ಇತ್ತೀಚಿನ ಸುದ್ದಿ