ಫುಡ್ ಪಾಯ್ಸನ್ ನಿಂದ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಹಾಸ್ಟೆಲ್ ಆಡಳಿತ ಮಂಡಳಿ ವಿರುದ್ಧ ದೂರು
ಫುಡ್ ಪಾಯ್ಸನ್‌ನಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದ ಸಿಟಿ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜ್ ಹಾಸ್ಟೆಲ್ ಆಡಳಿತ ಮಂಡಳಿಯ ವಿರುದ್ಧ ವೈದ್ಯರೊಬ್ಬರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಿಟಿ ನರ್ಸಿಂಗ್ ಕಾಲೇಜ್ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಸಂಶಯಾಸ್ಪದ ವಿಷಪೂರಿತ ಆಹಾರ ನೀಡಿ ಅಸ್ವಸ್ಥರಾಗುವಂತೆ ಮಾಡಲಾಗಿದೆ. ಅಲ್ಲದೆ ಈ ಘಟನೆಯ ಬಗ್ಗೆ ಆಡಳಿತ ಮಂಡಳಿಯು ಜಿಲ್ಲಾಡಳಿತಕ್ಕೆ ವರದಿ ನೀಡದೇ ಲೋಪ ಎಸಗಿದೆ. ಈ ಬಗ್ಗೆ ಸೂಕ್ತ ಕ್ರಮ ಪಾಲಿಸದಿರುವ ಆಡಳಿಯ ಮಂಡಳಿಯ ವಿರುದ್ಧ ಕ್ರಮಕೈಗೊಳ್ಳುವಂತೆ ದ. ಕ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಗದೀಶ್ ಎಂಬುವವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ವಿದ್ಯಾರ್ಥಿಗಳು ಚೇತರಿಕೆ:
ಮಂಗಳೂರು ನಗರದ ಸಿಟಿ ಆಸ್ಪತ್ರೆಯ ವಿದ್ಯಾರ್ಥಿಗಳ ಹಾಸ್ಟೆಲ್ ನಲ್ಲಿ ನಡೆದ ವಿಷಾಹಾರ ಸೇವನೆ ಪ್ರಕರಣದಲ್ಲಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು ಈ ವಿಷಾಹಾರದ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪ್ರಯೋಗಾಲಯದ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
ವಿಷಾಹಾರ ಸೇವನೆಯಿಂದ 137 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಆ ಪೈಕಿ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಬೇರೆ ಬೇರೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಬಹುತೇಕ ಎಲ್ಲರೂ ಚೇತರಿಸಿಕೊಂಡಿದ್ದು, ಕೆಲವರು ಇಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw