ಸ್ವಾಮೀಜಿಯ ಪಿಸ್ತೂಲ್ ಶೋಕಿ: ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ ವಿರುದ್ಧ ದೂರು
ಬೀದರ್: ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆ ಹುಮನಾಬಾದ್ ನ ಹೊರವಲಯದಲ್ಲಿರುವ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ.
ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್ – ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು ಅನುಯಾಯಿಗಳೊಂದಿಗೆ ನಿಂತಿದ್ದ ವೇಳೆ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ನಾಗೇಶ್ ಕಲ್ಲೂರ್ ಎಂಬವರು ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿ ಬಳಿಯಿದ್ದ ಪಿಸ್ತೂಲ್ ನ್ನು ಭಾನುವಾರ ರಾತ್ರಿ ಹುಮನಾಬಾದ್ ಸಬ್ ಇನ್ಸ್ ಪೆಕ್ಟರ್ ಮಂಜುನಗೌಡ ಪಾಟೀಲ್ ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಭೂಮಿ ಅತಿಕ್ರಮಣದ ಆರೋಪ ಕೇಳಿ ಬಂದಿದೆ.
ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಶನಿವಾರ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸೋಮನಾಥ ಲಕ್ಷ್ಮಣ ಪವಾರ ಎಂಬವರು ಸ್ವಾಮೀಜಿ ವಿರುದ್ಧ ದೂರು ದಾಖಲಿಸಿದ್ದಾರೆ. ಅತಿಕ್ರಮಣ ತಡೆಯಲು ಹೋದ ವೇಳೆ ತನ್ನ ಪತ್ನಿಯ ಮಾನಭಂಗಕ್ಕೆ ಯತ್ನಿಸಲಾಗಿದೆ ಎಂದು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw