ಮಾನ ಹಾನಿಗೆ ಯತ್ನ, ಮಗನ ಮೇಲೆ ಹಲ್ಲೆ: ಸೌಜನ್ಯ ತಾಯಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು - Mahanayaka
10:20 PM Wednesday 5 - February 2025

ಮಾನ ಹಾನಿಗೆ ಯತ್ನ, ಮಗನ ಮೇಲೆ ಹಲ್ಲೆ: ಸೌಜನ್ಯ ತಾಯಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

kusumavathi
05/08/2023

ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸಮೀಪ ಹತ್ಯೆಯಾದ ಸೌಜನ್ಯ ತಾಯಿ ಕುಸುಮಾವತಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ. 4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೆ.

ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ