ಮತ್ತೊಬ್ಬ ಮಾಜಿ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ದೂರು ದಾಖಲಾಗುವ ಸಾಧ್ಯತೆ!

rakshak (1)
26/03/2025

ಬೆಂಗಳೂರು: ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪದಲ್ಲಿ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ವಿರುದ್ಧ ದೂರು ದಾಖಲಾಗುವ ಸಾಧ್ಯತೆಗಳು ಕಂಡು ಬಂದಿವೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿಗೆ ಅಪಮಾನ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಗರಂ ಆಗಿದ್ದಾರೆ.
ರಕ್ಷಕ್ ಬುಲೆಟ್ ಸಹಸ್ಪರ್ಧಿಯನ್ನು ಹೊಗಳುವ ಭರದಲ್ಲಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎನ್ನಲಾಗಿದೆ.

“ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್ ನಲ್ಲಿ ಟ್ರಿಪ್ ಹೊಡಿತಿದಾಳೆ ಅನ್ನಿಸ್ತಿದೆ” ಅಂತ ರಕ್ಷಕ್ ಬುಲೆಟ್ ಡೈಲಾಗ್ ಹೊಡೆದಿದ್ದ. ಇದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ರೋಶಕ್ಕೆ ಒಳಗಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ

Exit mobile version