ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು!
![shivaraj kumar](https://www.mahanayaka.in/wp-content/uploads/2024/03/shivaraj-kumar-1.jpg)
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಸಿನಿಮಾ, ಜಾಹೀರಾತು ಹಾಗೂ ಬಿಲ್ ಬೋರ್ಡ್ ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್ಕುಮಾರ್ ಅವರ ಸಿನಿಮಾ, ಜಾಹೀರಾತು, ಬಿಲ್ ಬೋರ್ಡ್ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್, ಸೋಶಿಯಲ್ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ರಘು ಮನವಿ ಮಾಡಿದ್ದಾರೆ.
ಚುನಾವಣಾ ಆಯೋಗವು ನ್ಯಾಯಯುತವಾದ ಚುನಾವಣೆಯನ್ನು ನಡೆಸುತ್ತದೆ ಎಂದು ನನಗೆ ಭರವಸೆ ಇದೆ. ನನ್ನ ಮನವಿಗೆ ಆಯೋಗವು ಸ್ಪಂದಿಸುತ್ತದೆ ಮತ್ತು ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth