ಇನ್ನು ಮುಂದೆ 18 ವರ್ಷದೊಳಗಿನ ಮಕ್ಕಳಿಗೆ ಕಾಂಡೋಮ್ ಕೊಡುವಂತಿಲ್ಲ!
ಬೆಂಗಳೂರು: 18 ವರ್ಷದೊಳಗಿನ ಮಕ್ಕಳಿಗೆ ಇನ್ನು ಮುಂದೆ ಕಾಂಡೋಮ್ ಕೊಡಬಾರದು ಎಂದು ರಾಜ್ಯ ಔಷಧಿ ನಿಯಂತ್ರಣ ಮಂಡಳಿ ಆದೇಶ ನೀಡಿದ್ದು, ಮೆಡಿಕಲ್ ಶಾಪ್ ಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.
ರಾಜ್ಯ ಔಷಧಿ ನಿಯಂತ್ರಕರಾದ ಬಿ.ಟಿ.ಖಾನಾಪುರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾಂಡೋಮ್ ಅಥವಾ ಗರ್ಭ ನಿರೋಧಕ ಮಾತ್ರೆಗಳನ್ನು ಆನ್ ದಿ ಕೌಂಟರ್ ಕೊಡಬಾರದು ಎಂದು ರಿಸ್ಟ್ರಿಕ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಾ ಮೆಡಿಕಲ್ ಶಾಪ್ ಗಳಿಗೂ ರಾಜ್ಯ ಔಷಧಿ ನಿಯಂತ್ರಣ ಮಂಡಳಿ ಈ ಸುತ್ತೋಲೆ ಹೊರಡಿಸಿದ್ದು, ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್ ಪತ್ತೆಯಾಗಿರುವ ಘಟನೆಯ ನಂತರ ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಮಕ್ಕಳನ್ನು ಅನೈತಿಕ ಚಟುವಟಿಕೆಗಳಿಂದ ಹಾಗೂ ಪಿಡುಗುಗಳಿಂದ ದೂರವಿಡಲು ಈ ಮಹತ್ವದ ಕ್ರಮ ಜರುಗಿಸಲಾಗಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw