ಕಾಂಗ್ರೆಸ್ ​ನಿಂದ ಮಹಾದಾಯಿ ಜಾರಿಗಾಗಿ ಬೃಹತ್ ಪಾದಯಾತ್ರೆ: ಸತೀಶ್ ಜಾರಕಿಹೊಳಿ‌ - Mahanayaka

ಕಾಂಗ್ರೆಸ್ ​ನಿಂದ ಮಹಾದಾಯಿ ಜಾರಿಗಾಗಿ ಬೃಹತ್ ಪಾದಯಾತ್ರೆ: ಸತೀಶ್ ಜಾರಕಿಹೊಳಿ‌

sathish jarakiholi
18/01/2022

ಬೆಳಗಾವಿ: ದಕ್ಷಿಣ ಕರ್ನಾಟಕದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಇತ್ತೀಚೆಗೆ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್​ ಈಗ ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್  ಜಾರಕಿಹೊಳಿ‌ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಯೋಜನೆ ಜಾರಿ ಸಂಬಂಧ ನಡೆಯಲಿರುವ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮಹಾದಾಯಿ ಯೋಜನೆ ಜಾರಿಗಾಗಿ ಪಾದಯಾತ್ರೆ ನಡೆಸಲಾಗುವುದು ಎಂದರು.

ನರಗುಂದದಿಂದ ಮಹಾದಾಯಿ ಉಗಮಸ್ಥಾನ ಕಣಕುಂಬಿವರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಸಂಬಂಧ ಶೀಘ್ರದಲ್ಲಿಯೇ ರೂಪುರೇಷ ಸಿದ್ಧಗೊಳ್ಳಲಿದೆ. ಸರ್ಕಾರದ ಗಮನ ಸೆಳೆಯಲು ನಮ್ಮ ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

5ಜಿ ಸೇವೆ ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು: ಅಮೆರಿಕ ಏರ್ ​ಲೈನ್ಸ್​ ಕಂಪನಿ ಸಿಇಒಗಳ ಎಚ್ಚರಿಕೆ

ಹಳಿ ತಪ್ಪಿದ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು; ತಪ್ಪಿದ ದುರಂತ

ನಾರಾಯಣ ಗುರುಗಳ ವಿಚಾರ ಮುಂದಿಟ್ಟು ಕೇರಳದಿಂದ ಅನವಶ್ಯಕ ವಿವಾದ: ಸಚಿವ ಸುನಿಲ್ ಕುಮಾರ್

ಜೆಎನ್‌ ಯು ನ ಪಿಎಚ್‌ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು

ಕಾರಿನ ಟೈರ್ ಬ್ಲಾಸ್ಟ್: ಸ್ಥಳದಲ್ಲಿಯೇ ಇಬ್ಬರ ಸಾವು

 

ಇತ್ತೀಚಿನ ಸುದ್ದಿ