ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುತ್ತೇವೆ | ಸಿದ್ದರಾಮಯ್ಯ ಘೋಷಣೆ
15/02/2021
ಮಂಡ್ಯ: ಮುಂದಿನ ಬಾರಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದರೆ, ಒಬ್ಬರಿಗೆ 10 ಕೆ.ಜಿ. ಅಕ್ಕಿಯನ್ನು ನೀಡುತ್ತೇನೆ. ಅದೆಷ್ಟು ಖರ್ಚಾದರೂ ಪರವಾಗಿಲ್ಲ. 10 ಕೆ.ಜಿ. ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಒಬ್ಬ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ನೀಡುತ್ತಿದ್ದೆ. ಆದರೆ ಸಿಎಂ ಯಡಿಯೂರಪ್ಪ ಅದನ್ನು 5 ಕೆ.ಜಿ.ಗೆ ಇಳಿಸಿದ್ದಾನೆ. ಮುಂದಿನ ದಿನಗಳಲ್ಲಿ 3 ಕೆ.ಜಿ.ಗೆ ಇಳಿಸ್ತಾನೆ. ನಂತರ ನಿಲ್ಲಿಸುತ್ತಾನೆ ಎಂದು ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿಯೇ ವ್ಯಂಗ್ಯವಾಡಿದರು.
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಬರಲೇ ಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಒಬ್ಬರಿಗೆ 10 ಕೆ.ಜಿ. ಅಕ್ಕಿಯನ್ನು ನಾವು ಕೊಡುತ್ತೇವೆ, ಎಷ್ಟೇ ಖರ್ಚಾದರೂ ಕೊಡುತ್ತೇವೆ ಎಂದು ಅವರು ಘೋಷಿಸಿದರು.