ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷದಲ್ಲಿ ಮುಂದುವರಿಯುವುದಾಗಿ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ..
ಪಂಜಾಬ್ ನ ಭವಿಷ್ಯ ಮತ್ತು ಪಂಜಾಬ್ ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದಾರೆ.
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ದೆಹಲಿ ಭೇಟಿಗೆ ಮುನ್ನ ಅವರ ಮುಂದಿನ ಕ್ರಮದ ಬಗ್ಗೆ ಊಹಾಪೋಹಗಳ ನಡುವೆಯೇ ಸಿಧು ರಾಜೀನಾಮೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ: ಕಠಿಣ ಕಾನೂನು ಕ್ರಮಕ್ಕೆ ಡಿವೈಎಫ್ ಐ ಒತ್ತಾಯ
19 ತಿಂಗಳ ರಜೆಯ ಬಳಿಕ 1ರಿಂದ 5ನೇ ತರಗತಿವರೆಗೆ ಶಾಲಾರಂಭದ ಸುಳಿವು!
ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವೆ ಜೊಲ್ಲೆ ವಿರುದ್ಧ ತಿರುಗಿ ಬಿದ್ದ ಗೋಮಾತೆ | ಸಚಿವರಿಗೆ ತಿವಿಯಲು ಯತ್ನ
ಕಡಬ: ಕಾನ್ ಸ್ಟೇಬಲ್ ನಿಂದ ಅತ್ಯಾಚಾರ ಪ್ರಕರಣ | ಇಂದು ನಡೆದ ಬೆಳವಣಿಗೆಗಳೇನು?
ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ
ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು
ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು