ನಾಲ್ಕನೇ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ಹೈವೋಲ್ಟೇಜ್‌ ಕ್ಷೇತ್ರಗಳ ಅಭ್ಯರ್ಥಿ ಯಾರು? - Mahanayaka
6:03 PM Thursday 12 - December 2024

ನಾಲ್ಕನೇ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ಹೈವೋಲ್ಟೇಜ್‌ ಕ್ಷೇತ್ರಗಳ ಅಭ್ಯರ್ಥಿ ಯಾರು?

congress
19/04/2023

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದ್ದು, ಈ ಹಿನ್ನೆಲೆ ಮಂಗಳವಾರ (ಏಪ್ರಿಲ್‌ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ಹೈವೋಲ್ಟೇಜ್‌ ಕ್ಷೇತ್ರವಾದ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್‌.ಡಿ.ತಮ್ಮಯ್ಯ ಅವರನ್ನು ಕಣಕ್ಕಿಳಿಸಲಾಗಿದೆ.

ನಾಲ್ಕನೇ ಪಟ್ಟಿಯಲ್ಲಿ ಕಾಂಗ್ರೆಸ್‌ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಸೇರಿದ್ದ ಎಚ್‌.ಡಿ.ತಮ್ಮಯ್ಯ ಅವರನ್ನು ಅಖಾಡಕ್ಕೆ ಇಳಿಸಿದೆ.

ಶನಿವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಎಚ್.​​ಡಿ. ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್ ತಮ್ಮಯ್ಯಗೆ ಗಾಳ ಹಾಕಿದ್ದು, ಇದರಿಂದ ಕಾಫಿನಾಡಿನ ಕಾಂಗ್ರೆಸ್‌ ನಲ್ಲಿ ಬಂಡಾಯ ಹೇಳುವ ಸಾಧ್ಯತೆಯೂ ಇದೆ. ಎರಡು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಎಚ್.ಡಿ. ತಮ್ಮಯ್ಯ ಇದೀಗ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಈ ಮೊದಲು ಎಚ್.ಡಿ. ತಮ್ಮಯ್ಯಗೆ ಟಿಕೆಟ್ ನೀಡಲು ಮೂಲ ಕಾಂಗ್ರೆಸ್ಸಿಗರು ಭಾರಿ ವಿರೋಧ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್‌ ಟಿಕೆಟ್‌ಗೆ ಚಿಕ್ಕಮಗಳೂರು ಕ್ಷೇತ್ರದಿಂದ ಅರ್ಜಿ ಸಲ್ಲಿಸಿದ್ದ ಹಾಕಿರುವ ಆರು ಜನರ ಪೈಕಿ ಎಚ್‌.ಡಿ.ತಮ್ಮಯ್ಯಗೆ ಮಣೆ ಹಾಕಿದೆ. ಈ ಮೂಲಕ ಮೂಲ ಕಾಂಗ್ರೆಸ್ಸಿಗರನ್ನು ವಿರೋಧಿಸಿ ತಮ್ಮಯ್ಯಗೆ ಟಿಕೆಟ್‌ ಘೋಷಣೆ ಮಾಡಿದೆ.

1. ಹರಿಹರ ಕ್ಷೇತ್ರ– ನಂದಿಗಾವಿ ಶ್ರೀನಿವಾಸ್

2. ಶ್ರವಣಬೆಳಗೊಳ – ಎಂ. ಎಸ್. ಗೋಪಾಲಸ್ವಾಮಿ

3. ಹುಬ್ಬಳ್ಳಿ-ಧಾರವಾಡ ಪಶ್ಚಿಮ- ದೀಪಕ್ ಚಿಂಚೋರೆ

4. ಚಿಕ್ಕಮಗಳೂರು- ಎಚ್‌.ಡಿ.ತಮ್ಮಯ್ಯ

5. ಲಿಂಗಸಗೂರು- ದುರ್ಗಪ್ಪ ಎಸ್. ಹೂಲಗೇರಿ

6. ಶಿಗ್ಗಾಂವಿ -ಮೊಹಮ್ಮದ್ ಯೂಸೂಫ್

7. ನಾಮಪತ್ರ ಸಲ್ಲಿಸಿದ ವೈ.ಎಸ್‌.ವಿ.ದತ್ತಾ

ದೇವೇಗೌಡರ ಮಾನಸ ಪುತ್ರ ಎಂದೇ ಕರೆಸಿಕೊಳ್ಳುವ ವೈಎಸ್‌ವಿ ದತ್ತಾ ಇಂದು(ಏಪ್ರಿಲ್‌ 18) ರಂದು ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಮಾಜಿ ಸಚಿವ ಎಚ್‌ ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ