ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ವಿಚಾರ: ಕಾಂಗ್ರೆಸ್ ನ ಬಂಡವಾಳ ಬಯಲು ಮಾಡಿದ ಮಾಧುಸ್ವಾಮಿ - Mahanayaka

ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ವಿಚಾರ: ಕಾಂಗ್ರೆಸ್ ನ ಬಂಡವಾಳ ಬಯಲು ಮಾಡಿದ ಮಾಧುಸ್ವಾಮಿ

madhuswamy
23/03/2022

ಬೆಂಗಳೂರು: ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸದನದಲ್ಲಿ ಭಾರೀ ಚರ್ಚೆ ನಡೆಯಿತು.

ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಈ ವಿಚಾರವನ್ನೆತ್ತಿಕೊಂಡು ಮಾತನಾಡಿ,  ಈ ಘಟನೆಗಳ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು  ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಎರಡೂ ಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆಯಿತು.

ಈ ವೇಳೆ ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, 2002ರ ಹಿಂದೂ ಧಾರ್ಮಿಕ ದತ್ತಿ ಕಾಯ್ದೆಯನ್ನು ಉಲ್ಲೇಖಿಸಿ, ಇಲ್ಲಿ ನೋಡಿ. ಇದೇನು ಬಿಜೆಪಿ ಮಾಡಿದ ಕಾಯ್ದೆ- ಕಾನೂನು ಅಲ್ಲ. ನಿಮ್ಮದೇ ಕಾಂಗ್ರೆಸ್​ ನವರು ಮಾಡಿದ್ದು. ಧಾರ್ಮಿಕ ಸಂಸ್ಥೆಗಳ ಸಮೀಪದ ಕಟ್ಟಡ, ಜಮೀನು, ನಿವೇಶನಗಳನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡುವಂತಿಲ್ಲ ಎಂದು ಈ ಕಾಯ್ದೆಯಲ್ಲಿ ಹೇಳಿದೆ ಎಂದರು.

ಬೇರೆ ಧರ್ಮದವರಿಗೆ ಅವಕಾಶ ಇಲ್ಲ ಎಂದೂ ಇದೇ ಕಾಯ್ದೆಯಲ್ಲಿ ಸ್ಪಷ್ಟವಾಗಿದೆ. ದೇವಸ್ಥಾನದ ಆವರಣ ಬಿಟ್ಟು ಹೊರಗಡೆ ಆದರೆ ಅದನ್ನು ಸರಿಪಡಿಸಬಹುದು ಅಷ್ಟೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಷಪೂರಿತ ಮಿಠಾಯಿ ಸೇವಿಸಿ ನಾಲ್ವರು ಮಕ್ಕಳ ದಾರುಣ ಸಾವು

ಹಾಸನದ ‘ರಾಜೀವ್ ಆಸ್ಪತ್ರೆ’ಯಲ್ಲಿ ಮಾರ್ಚ್ 25ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೋವಿಡ್-19 ಲಸಿಕೆ ಕಡ್ಡಾಯಗೊಳಿಸಿಲ್ಲ: ಸುಪ್ರೀಂ ಕೋಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಇಲಾಖೆಯ ಪೂರ್ವಾನುಮತಿ ಇಲ್ಲದೆ ವಿದೇಶ ಪ್ರಯಾಣ: ಇನ್‌ಸ್ಪೆಕ್ಟರ್‌ ಅಮಾನತು

ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್​​ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ

ಇತ್ತೀಚಿನ ಸುದ್ದಿ