ಕಾಂಗ್ರೆಸ್ ಭಯೋತ್ಪಾದನೆಯ ಮನಸ್ಥಿತಿಗಳನ್ನು ಪ್ರೋತ್ಸಾಹಿಸುತ್ತದೆ | ಸಚಿವೆ ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ಕಾಂಗ್ರೆಸ್ ನ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತದೆ. ಹಾಗಾಗಿಯೇ ಕಾಂಗ್ರೆಸ್ ನವರು ಕಾಶ್ಮೀರ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರೆಸ್ಸೆಸ್ ಹಾಗೂ ತಾಲಿಬಾನ್ ಎರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಧೃವನಾರಾಯಣ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಿ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಸರ್ಕಾರ ಭಯೋತ್ಪಾದಕರ ಹುಟ್ಟಡಗಿಸಿದೆ. ಇದರಿಂದ ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದಯಕೊಂಡಿದೆ ಎಂದು ಅವರು ಕಿಡಿಕಾರಿದರು.
ಇನ್ನೂ ಅಫ್ಘಾನಿಸ್ತಾನದಲ್ಲಿ ಕ್ಷೋಭೆ ಉಂಟಾಗಿದೆ. ಜಗತ್ತೇ ನಿರೀಕ್ಷೆ ಮಾಡದ ಕೆಲಸವನ್ನು ಭಯೋತ್ಪಾದಕರು ಮಾಡಿದ್ದಾರೆ. ಹಾಗಾಗಿ ದೇಶ ಎಚ್ಚೆತ್ತುಕೊಳ್ಳಬೇಕು. ಭಯೋತ್ಪಾದಕತೆ ಮತ್ತು ಭಯೋತ್ಪಾದಕ ಮನಸ್ಸುಗಳಿಗೆ ಬೆಂಬಲ ಕೊಡುವವರನ್ನು ಕೂಡ ಗಮನಿಸಬೇಕು, ನಿಗಾ ವಹಿಸಬೇಕು, ಅವರನ್ನು ಶಿಕ್ಷೆಗೊಳಪಡಿಸಬೇಕು ಆಗ ಮಾತ್ರ ಭಯೋತ್ಪಾದನೆ ಹೋಗಲಾಡಿಸಬಹುದು ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ಯೂಟ್ಯೂಬ್ ನಲ್ಲಿ ವೈರಲ್
ಮಹಿಳೆಯರು ಮನೆಯಲ್ಲಿಯೇ ಇರಿ, ಇಲ್ಲವಾದರೆ ಉಗ್ರರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಬಹುದು | ತಾಲಿಬಾನ್ ನಾಯಕ
ಮಹಿಳೆಯರು ಮನೆಯಲ್ಲಿಯೇ ಇರಿ, ಇಲ್ಲವಾದರೆ ಉಗ್ರರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಬಹುದು | ತಾಲಿಬಾನ್ ನಾಯಕ
ಎನ್. ಮಹೇಶ್ ಹಿಂದೂ ಧರ್ಮಕ್ಕೆ ಬೈದು ಶಾಸಕರಾದವರು! | ಎನ್.ಮಹೇಶ್ ವಿರುದ್ಧ ಅಪಸ್ವರ ಎತ್ತಿದ ಬಿಜೆಪಿ ಶಾಸಕ
ತೆನೆ ಇಳಿಸಿ, ಕೈ ಹಿಡಿಯುತ್ತಾರಾ ಜಿ.ಟಿ.ದೇವೇಗೌಡ? | ಅವಮಾನಗಳಿಂದ ಬೇಸತ್ತು ಜೆಡಿಎಸ್ ಬಿಡಲು ತೀರ್ಮಾನ!
“ನನ್ನನ್ನು ಮದುವೆಗೆ ಯಾಕೆ ಕರೆದಿಲ್ಲ” ಎಂದು ಪ್ರಶ್ನಿಸಿ ನವವಿವಾಹಿತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕ!
ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳಿಗೆ ಬಿಗ್ ಶಾಕ್ | 6 ವರ್ಷಗಳ ಕಾಲ ಅನರ್ಹರಾಗುವ ಸಾಧ್ಯತೆ