ಚುನಾವಣೆ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ - Mahanayaka
2:28 PM Wednesday 5 - February 2025

ಚುನಾವಣೆ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

27/12/2020

ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಇಂದು ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ತಮ್ಮ ಹಕ್ಕು ಚಲಾಯಿಸಿದ್ದು, ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕಿತ್ತಾಟ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ.

ಇನ್ನೂ  ಅಭ್ಯರ್ಥಿ ಚಿಹ್ನೆ ಬದಲಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ  ಕಲಾದಗಿ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಸ್ಥಿಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ