ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ | ನಾಲ್ವರ ಸ್ಥಿತಿ ಗಂಭೀರ

05/02/2021

ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದ್ದು,  ಕಾಂಗ್ರೆಸ್ ನ 20ಕ್ಕೂ ಅಧಿಕ ಕಾರ್ಯಕರ್ತರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ  ಉಳ್ಳೆಸೂಗೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದರು. ಚುನಾವಣೆಯ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು, ಈ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಮೆರವಣಿಗೆಯ ಮೇಲೆ ಸೋತ ಹತಾಶೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.  ಕಲ್ಲು ತೂರಾಟದಲ್ಲಿ  12ಕ್ಕೂ ಅಧಿಕ ಕಾರು, 30 ಬೈಕ್ ಗಳು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಇನ್ನೂ ಕಲ್ಲುತೂರಾಟದ ಪರಿಣಾಮ ನಾಲ್ವರಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ವಡಗೇರಾ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಪೊಲೀಸರ ತನಿಖೆಯ ಬಳಿಕ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

ಇತ್ತೀಚಿನ ಸುದ್ದಿ

Exit mobile version