ಕಾಂಗ್ರೆಸ್ ಗ್ಯಾರೆಂಟಿ ವಿಚಾರದಲ್ಲಿ ಕಾಂಗ್ರೆಸ್– ಬಿಜೆಪಿ ಕಾರ್ಯಕರ್ತರ ಗಲಾಟೆ: ಇಬ್ಬರಿಗೆ ಗಾಯ
ಚಾಮರಾಜನಗರ: ಗ್ಯಾರಂಟಿ ಯೋಜನೆ ಸಂಬಂಧ ಕಾಂಗ್ರೆಸ್– ಬಿಜೆಪಿ ರಾಜ್ಯಮಟ್ಟದ ನಾಯಕರ ನಡುವೆ ಮಾತಿನ ಯುದ್ಧ ನಡೆಯುತ್ತಿದ್ದರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರದಲ್ಲಿ ಕಾರ್ಯಕರ್ತರು ಕೈ–ಕೈ ಮಿಲಾಯಿಸಿಕೊಂಡಿದ್ದಾರೆ.
ಉಚಿತ ಕೊಡುಗೆಗಳ ವಿಚಾರವಾಗಿ ಗುಂಡ್ಲುಪೇಟೆಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಚನ್ನಮಲ್ಲಿಪುರದ ಬಿಜೆಪಿ ಕಾರ್ಯಕರ್ತ ಗೋಪಾಲಪ್ಪ ಮತ್ತು ಕಾಂಗ್ರೆಸ್ ಕಾರ್ಯಕರ್ತ ನಂದೀಶ್ ಮಧ್ಯೆ ಜಗಳವಾಗಿದೆ. ಗ್ಯಾರಂಟಿ ಭಾಗ್ಯಗಳ ಕುರಿತು ಗೋಪಾಲಪ್ಪ ಟೀಕಿಸಿದ್ದರು. ಇದನ್ನು ಪ್ರಶ್ನಿಸಿದ ನಂದೀಶ್ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಗೋಪಾಲಪ್ಪ ಅವರ ಮಗ ಮನು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನಂದೀಶ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗೋಪಾಲಪ್ಪ ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ಗೋಪಾಲಪ್ಪ ಹಾಗೂ ನಂದೀಶ್ ದೂರು ಹಾಗೂ ಪ್ರತಿದೂರು ಕೊಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw