ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ - Mahanayaka
3:10 AM Wednesday 11 - December 2024

ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ

baburao chinchansur car
15/04/2023

ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ.

ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದರು.

ತಡರಾತ್ರಿ ಎರಡು ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಎಲುಬು ಹಾಗೂ ನರಗಳಿಗೆ ಏಟು ಬಿದ್ದಿದೆ. ಆಸ್ಪತ್ರೆಯ ತಜ್ಞ ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಾಬುರಾವ್ ಅವರ ಮನೆ ಕಲಬುರಗಿಯ ಶಾಂತಿನಗರದಲ್ಲಿದೆ. ಕ್ಷೇತ್ರದಲ್ಲಿ ಪ್ರಚಾರ ಮುಗಿಸಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ ಎಂದು ಗೊತ್ತಾಗಿದೆ.

ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನಿಗೆ ಆಕಾಶವಾಣಿ ಕೇಂದ್ರ ಬಳಿ ರಸ್ತೆಯ ಮಧ್ಯೆ ಇರುವ ಗುಂಡಿ ಕಾಣದೆ ಕಾರು ಗುಂಡಿಯಲ್ಲಿ ಸಿಲುಕಿ ಸ್ಕಿಡ್ ಆಗಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ