ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಸಿದ್ದರಾಮಯ್ಯ?
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಅಮಾವಾಸ್ಯೆ ಹೊಸತೊಡಕು ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಯುಗಾದಿ ಹಬ್ಬದ ದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಅಂತಿಮ ಕ್ಷಣದಲ್ಲಿ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿತ್ತು.
ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದಾರೆ. ಅದ್ರೆ ಕೋಲಾರ ಕ್ಷೇತ್ರ ಅಭ್ಯರ್ಥಿಯ ಹೆಸರನ್ನು ಬಿಡುಗಡೆಗೊಳಿಸಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw