ಕೊನೆಗೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ

dk shivakumar
20/04/2023

ಕೊನೆಗೂ ಹಗ್ಗಜಗ್ಗಾಟದ ಮಧ್ಯೆ, ಬಲಾಬಲ ಪ್ರದರ್ಶನದ ಮಧ್ಯೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್‌ ಹೈಕಮಾಂಡ್  ಪಕ್ಷದ‌‌ ಅಧಿಕೃತ ಅಭ್ಯರ್ಥಿಯಾಗಿ ಘೊಷಿಸಿದೆ.

ಬುಧವಾರ ರಾತ್ರಿ ಕಾಂಗ್ರೆಸ್ ಪ್ರಕಟಿಸಿದ ಅಭ್ಯರ್ಥಿಗಳ 6ನೇ ಪಟ್ಟಿಯಲ್ಲಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬೆಳಗ್ಗೆ 10 ಗಂಟೆಗೆ ಕಾವೂರು ಪೇಟೆಯಲ್ಲಿ ಬಹಿರಂಗ ಸಭೆ ನಡೆಯಲಿದೆ.

ಬಳಿಕ ಕಾವೂರು ಪೇಟೆಯಿಂದ ಮಹಾಲಿಂಗೇಶ್ವರ ದೇವಸ್ಥಾನದ ವರೆಗೆ ಜಾಥಾ ನಡೆಸಿ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ 1 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version