ಉಡುಪಿ: ಹೂಡೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತಪ್ರಚಾರ.
ಉಡುಪಿ: ಹೂಡೆ ಪರಿಸರದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತಪ್ರಚಾರ. ನಡೆಸಿದರು.ಅವರು ಮನೆ-ಮನೆ ಭೇಟಿ ಮಾಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ಮತದಾರರಿಗೆ ವಿತರಿಸಿ ಮತಯಾಚಿಸಿದರು.
“ ಬಿಜೆಪಿ ದುರಾಡಳಿತದಿಂದ ರಾಜ್ಯದ ಅಭಿವೃದ್ದಿಗೆ ಹಿನ್ನಡೆಯಾಗಿದೆ. ಉಡುಪಿಯಲ್ಲಿ ಭೃಷ್ಟಾಚಾರ ಮಿತಿ ಮೀರಿ ಹೋಗಿದೆ. ಉದ್ಯೋಗಾವಕಾಶಗಳು ಕಡಿಮೆಯಾಗಿದೆ. ಕಾಂಗ್ರೆಸ್ ಗೆ ಅವಕಾಶ ಮಾಡಿಕೊಟ್ಟಲ್ಲಿ ಉಡುಪಿಯ ಯುವ ಜನತೆಗೆ ಉದ್ಯೋಗ ಸೃಷ್ಟಿ ಜೊತೆಗೆ, ಶಾಂತಿ – ಸೌಹಾರ್ದತೆ ನೆಲೆಸುವಂತೆ ಮಾಡುತ್ತೇವೆ”. ಎಂದರು.
ಈ ಸಂದರ್ಭದಲ್ಲಿ ಮಾಜಿ ತಾ.ಪಂ ಸದಸ್ಯ ಟಿ. ರಹಮತುಲ್ಲಾ , ತೋನ್ಸೆ ಗ್ರಾ.ಪಂ ಉಪಾಧ್ಯಕ್ಷ ಉಸ್ತಾದ್ ಸಾದಿಕ್, ಬಿ. ಅಫ್ಜಲ್, ಅಹ್ಮದ್ ರಜಾಕ್, ತೋನ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಫೌಝಿಯಾ ಸಾದಿಕ್, ನಂದ ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw