ದಿಲ್ಲಿ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ; ಸಂತ್ರಸ್ತರ ಗುರುತುಗಳನ್ನು ತಕ್ಷಣ ಬಹಿರಂಗಪಡಿಸಲು ಆಗ್ರಹ

ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಒತ್ತಾಯಿಸಿದ್ದಾರೆ.
ಸಾವುಗಳು ಮತ್ತು ಗಾಯಗಳ ನಿಖರ ಸಂಖ್ಯೆಯನ್ನು ತಕ್ಷಣ ಬಹಿರಂಗಪಡಿಸುವಂತೆ ಅವರು ಮನವಿ ಮಾಡಿದ್ದಾರೆ. ಮತ್ತು ಕೇಂದ್ರದಿಂದ ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ನೀಡಬೇಕು ಅಂದರು.
ಸತ್ತವರು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಗುರುತನ್ನು ಸಹ ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವುದು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಬೆಂಬಲ ನೀಡುವುದು ಆದ್ಯತೆಯಾಗಿರಬೇಕು ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj