ಕಾಂಗ್ರೆಸ್ ನ ಹೀನಾಯ ಸೋಲು: ‘ಚಿಂತಿಸಿ ಫಲವಿಲ್ಲ’ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಸ್ಥಾನ ಗೆದ್ದು, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ.
ಚುನಾವಣೆಯಲ್ಲಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್ಸಿನಿಂದ ಜೈರಾಂ ರಮೇಶ್ ಜಯಗಳಿಸಿದ್ದಾರೆ. ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ಸಿನಿಂದ ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿದ ಮನ್ಸೂರ್ ಆಲಿ ಖಾನ್ ಸೋಲುಂಡಿದ್ದಾರೆ.
ಈ ಬಗ್ಗೆ ಬೇಸರದ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನನಗೆ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗುತ್ತದೆ ಎನ್ನುವ ವಿಶ್ವಾಸವಿತ್ತು. ಜೆಡಿಎಸ್ ನವರು ನಮಗೂ ಬೆಂಬಲ ಕೊಡಬಹುದು ಎಂದು ನಿರೀಕ್ಷಿಸಿದ್ದೆವು, ಅದೇ ರೀತಿಯಲ್ಲಿ ಅವರಿಗೆ ನಾವು ಬೆಂಬಲ ಕೊಡಬಹುದು ಎನ್ನುವ ನಿರೀಕ್ಷೆಯಲ್ಲಿ ಅವರಿದ್ದರು. ಆದರೆ ಅದು ಆಗಲಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಕುಮಾರಸ್ವಾಮಿಯವರ ಆರೋಪಕ್ಕೆ ಉತ್ತರಿಸಿದ ಡಿಕೆಶಿ ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸಿದರೆ ಪ್ರಯೋಜನವಿಲ್ಲ. ಎಲ್ಲರೂ ಅವರವರ ಸಂಖ್ಯೆಯ ಆಧಾರದ ಮೇಲೆ ಚುನಾವಣೆ ಗೆದ್ದಿದ್ದಾರೆ. ಎಲ್ಲರಿಗೂ ಸ್ವಾಭಿಮಾನ ಎನ್ನುವುದು ಇರುತ್ತದೆ, ಈಗ ಅದನ್ನೆಲ್ಲಾ ಚಿಂತಿಸಿ ಪ್ರಯೋಜನವಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕತ್ತೆ ಸಾಕಣಿಕೆ ಕೇಂದ್ರ ಸ್ಥಾಪಿಸಿದ ರಾಮನಗರದ ಶ್ರೀನಿವಾಸ್ ಗೌಡ
ನಮ್ಮ ಮೆಟ್ರೋದಲ್ಲಿ ಇನ್ನು ಮುಂದೆ ತಮಿಳುನಾಡಿಗೂ ಪ್ರಯಾಣಿಸಬಹುದು!