ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್ - Mahanayaka

ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್

nalin kumar kateel
25/01/2022

ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನೆಗಳು, ಮೂರು ವರ್ಷ ಕೋವಿಡ್ ನಡುವೆ ಆಗಿರುವ ಅಭಿವೃದ್ಧಿ, ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದ ಅಭಿವೃದ್ಧಿ ನೋಡಿ ಕಾಂಗ್ರೆಸ್​ನಲ್ಲಿ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್​ನವರು ಬಿಜೆಪಿ ಕಡೆ ಮುಖ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಅಧಿಕಾರದ ಹಗಲು ಗನಸು ಕಾಣುತ್ತಿದ್ದಾರೆ. ಪ್ರಚಲಿತ ರಾಜಕಾರಣ ವಿದ್ಯಮಾನಗಳಿಂದ ಭಯಭೀತರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸ್ಪಷ್ಟ ಎಂದು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರು ಅತಂತ್ರ ಸೃಷ್ಟಿ ಮಾಡಲು ಹೊರಟಿದ್ದಾರೆ. ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯ ಯಾವೊಬ್ಬರೂ ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲ ಎಂದರು.

ನಮ್ಮದು ಶಿಸ್ತಿನ ಪಕ್ಷ, ನಮ್ಮಲ್ಲಿ ಎಲ್ಲರೂ ಶಿಸ್ತು ಅನುಸರಿಸಬೇಕು. ಎಲ್ಲಾ ಎಚ್ಚರಿಕೆ ನೀಡಿದರೂ ಶಿಸ್ತು ಉಲ್ಲಂಘನೆ ಸಹಿಸಲ್ಲ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಬಹಿರಂಗವಾಗಿ ಹೇಳಿಕೆ ನೀಡಬಾರದು. ಮಾಧ್ಯಮಗಳ ಮೂಲಕ ಮಾತನಾಡುವವರನ್ನೂ ಕರೆಸಿ ಈ ಬಗ್ಗೆ ಮಾತನಾಡುತ್ತೇನೆ.
ಈಗಾಗಲೇ ಪದೇಪದೆ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ರಾಜ್ಯದ ಶಿಸ್ತು ಸಮಿತಿ ಮೂಲಕ‌ ಸ್ಪಷ್ಟೀಕರಣ ಪಡೆದು ಕೇಂದ್ರಕ್ಕೆ ವರದಿ ನೀಡಲಾಗಿದೆ. ಅಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ. ಈಗಾಗಲೇ ನೋಟಿಸ್ ಪಡೆದವರು ಸ್ಪಷ್ಟೀಕರಣ ಕೊಟ್ಟಿದ್ದಾರೆ. ಮುಂದೆ ಯಾರೇ ಶಿಸ್ತು ಉಲ್ಲಂಘಿಸಿದರೂ ಪಕ್ಷದ ಶಿಸ್ತು ಸಮಿತಿ ನೋಟಿಸ್ ನೀಡಲಿದೆ. ವರಿಷ್ಠರು ಮುಂದೇನು ಮಾಡಬೇಕು ಎಂದು ನಿರ್ಧರಿಸಲಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ

ತಂದೆಯನ್ನು ಮನೆಯಿಂದ ಹೊರಹಾಕಿದ ಪುತ್ರನಿಗೆ ತಕ್ಕಶಾಸ್ತಿ

ಸಹೋದ್ಯೋಗಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ ಹೈಕೋರ್ಟ್‌ ಜಾಮೀನು

ವಿಷಕಾರಿ ಹಾವನ್ನು ಕೊರಳಿಗೆ ಸುತ್ತಿ ಮುತ್ತಿಟ್ಟವನ ಸ್ಥಿತಿ ಚಿಂತಾಜನಕ

ರೈಲಿನಲ್ಲಿ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 1.48 ಕೋಟಿ ರೂ. ನಗದು, ಚಿನ್ನಾಭರಣ ವಶ

 

ಇತ್ತೀಚಿನ ಸುದ್ದಿ