ಕಾಂಗ್ರೆಸ್ ಜಾತಿ, ಧರ್ಮವನ್ನು ಒಡೆಯುವ ಪಕ್ಷ : ಶೋಭಾ ಕರಂದ್ಲಾಜೆ ವಾಗ್ದಾಳಿ
ಚಾಮರಾಜನಗರ : ಕಾಂಗ್ರೆಸ್ ಅಂದರೆ ಜಾತಿ ಹಾಗೂ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಗುಂಡ್ಲುಪೇಟೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕ ಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿ, ಜಾತಿ ಮತ್ತು ಧರ್ಮಗಳನ್ನು ಹೊಡೆಯುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ, ಸಿದ್ದರಾಮ ಯ್ಯ ಕೇವಲ ಒಂದು ಸಮುದಾಯಕ್ಕೆ ಮಾತ್ರ ಶಾದಿ ಭಾಗ್ಯ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು 10 ಕೆಜಿ ಅಕ್ಕಿ ನೀಡಿದರೆ ಅದಕ್ಕೆ ಸಿದ್ದರಾಮಯ್ಯ ಅವರು ಅನ್ನ ಭಾಗ್ಯ ಎನ್ನುವ ಸ್ಟಿಕರ್ ಹಾಕಿಕೊಂಡು ಅನ್ನಭಾಗ್ಯ ಕಾಂಗ್ರೆಸ್ ಯೋಜನೆ ಎಂದು ಹೇಳಿಕೊಂಡರು ಎಂದು ವಾಗ್ದಾಳಿ ಮಾಡಿದರು.
ಹಿಂದಿನ ಪ್ರಧಾನಿಯ ಸಮಯದಲ್ಲಿ ಭಾರತೀಯ ರನ್ನು ವಿದೇಶಗಳಲ್ಲಿ ಬಿಕ್ಷುಕರಂತೆ ಕಾಣುತ್ತಿದ್ದರು. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ವಿದೇಶಗಳಲ್ಲಿ ಭಾರತೀಯರಿಗೆ ರೆಡ್ ಕಾರ್ಪೇಟ್ ಹಾಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಅವರು, ಈ ಬಾರಿ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ಅವರನ್ನು ಸುಮಾರು 30ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw