ಕಾಂಗ್ರೆಸ್ ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಕಾಂಗ್ರೆಸ್ ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
`ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ಹಾಗೂ ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರಿಗೆ ಅನ್ಯಾಯ ಮಾಡಿದರು. ಸಂವಿಧಾನ ರಚನಾ ಸಭೆಯಲ್ಲಿ ಇರಬಾರದು ಎನ್ನುವ ಕಾರಣಕ್ಕೆ ಹಿಂದೂ ಬಾಹುಳ್ಯ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟು, ಎರಡೆರಡು ಬಾರಿ ಅವರನ್ನು ಸೋಲಿಸಿ, ಮಧ್ಯಂತರ ಸರ್ಕಾರ ಬಾರದಂತೆ ತಡೆದಿದ್ದರು ಎಂದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಯಾವ ಕಾರಣಕ್ಕೆ ತಮ್ಮ ಜೀವನ ಮೀಸಲಿಟ್ಟಿದ್ದಾರೋ ಅದನ್ನ ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD